ಕರಾವಳಿ

ಉಡುಪಿ : ಮಹಾರಾಷ್ಟ್ರ ಮತ್ತು ಕೇರಳ ದಿಂದ ರೈಲಿನಲ್ಲಿ ಆಗಮಿಸುವ ಪ್ರಯಾಣಿಕರ RTPCR ಪರೀಕ್ಷೆಗೆ ನೋಡಲ್ ಅಧಿಕಾರಿ ನೇಮಕ

0

ಉಡುಪಿ: ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುತ್ತಿರುವ ಪ್ರಯಾಣಿಕರ RTPCR ವರದಿಯನ್ನು ರೈಲು ನಿಲ್ದಾಣಗಳಲ್ಲಿ ಸಂಗ್ರಹಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಉಡುಪಿ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯನ್ನಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ( ಮೊ.98454 32303 ) ಹಾಗೂ ಮೇಲ್ವಿಚಾರಕರಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾ ಸಂಯೋಜಕ ದಿನೇಶ್ (98861 13207 ) ಮತ್ತು ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣಕ್ಕೆ ನೋಡಲ್ ಅಧಿಕಾರಿಯನ್ನಾಗಿ ಬೈಂದೂರುನ ತಾಲೂಕು ಕ್ರೀಡಾಧಿಕಾರಿ ಪ್ರಭಾಕರ್ (ಮೊ.79751 85766 ) ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಈ ಅಧಿಕಾರಿಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ರೈಲು ಮಾರ್ಗದ ಮೂಲಕ ಆಗಮಿಸುವ ಪ್ರಯಾಣಿಕರು 72 ಗಂಟೆಯ ಮುಂಚಿನ RTPCR ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವರದಿ ಇಲ್ಲದೇ ಇದ್ದಲ್ಲಿ ಅಂತಹ ಪ್ರಯಾಣಿಕರನ್ನು ಕಡ್ಡಾಯವಾಗಿ ರೈಲ್ವೆ ಸ್ಟೇಶನ್ ನಲ್ಲಿ ಖಂಖಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com