ಮಂಗಳೂರು : ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಗಲಿದ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರ ಅಂತಿಮ ದರ್ಶನ ನಡೆಯಿತು.
ಈ ಸಂದರ್ಭ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಡಿಸಿ ಡಾ. ರಾಜೇಂದ್ರ ಕೆ.ವಿ, ಎಸ್ ಪಿ ಶಶಿಕುಮಾರ್ ಮೊದಲಾದರು ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಆಸ್ಕರ್ ಕುಟುಂಬಕ್ಕೆ ಸಾಂತ್ವನ ಹೇಳಿದರು.