ವರದಿ : ದಿನೇಶ್ ರಾಯಪ್ಪನಮಠ
ಉಡುಪಿ : ಜಿಲ್ಲೆಯ ರಾ. ಹೆ.66 ರ ಹಲವು ಭಾಗಗಳಲ್ಲಿ ಮೇಲ್ಸೇತುವೆ ನಿರ್ಮಿಸುವ ಅಗತ್ಯತೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಚಿವೆ ಶೋಭಾ ಕರಂದ್ಲಾಜೆ ಮನವರಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮನವಿ ಪುರಸ್ಕರಿಸಿದ ಕೇಂದ್ರ ಸಚಿವರು ಅಂಬಲಪಾಡಿ (24.56 ಕೋ.) ಮತ್ತು ಸಂತೆಕಟ್ಟೆ(24.47 ಕೋ.) ಯಲ್ಲಿ ಒಟ್ಟು 50 ಕೋ.ರೂ. ವೆಚ್ಚದಲ್ಲಿ ವಾಹನ ಮೇಲ್ಸೇತುವೆ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿದ್ದಾರೆ.
ಅಂಬಲಪಾಡಿ ಮತ್ತು ಸಂತೆಕಟ್ಟೆ ಪ್ರದೇಶಗಳು ಕೂಡು ರಸ್ತೆಯನ್ನು ಹೊಂದಿದ್ದು, ವಾಹನ ಸಂಚಾರ ಹೆಚ್ಚಾಗಿದೆ. ಹೀಗಾಗಿ ಬ್ಲಾಕ್ ಸ್ಪಾಟ್ ಝೋನ್ ಎಂದು ಗುರುತಿಸಲಾಗಿತ್ತು. ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕೆಲಸ ಆರಂಭಗೊಳ್ಳಲಿದೆ ಎಂದು ತಿಳಿಸಲಾಗಿದೆ.
Advertisement. Scroll to continue reading.