ಹಾಸನ: ರಾಜ್ಯದ 25 ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಹಾಸನದಲ್ಲಿ ಜೆಡಿಎಸ್ ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರೇವಣ್ಣ ಪುತ್ರ ಸೂರಜ್ ರೇವಣ್ಣ ಅಭ್ಯರ್ಥಿಯಾಗಿ ಇಂದು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಇದೇ ಮೊದಲ ಬಾರಿಗೆ ಸೂರಜ್ ರೇವಣ್ಣ ಚುನಾವಣಾ ಕಣಕ್ಕಿಳಿದಿದ್ದಾರೆ. ಈ ಮೊದಲು ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಸೂರಜ್ ರೇವಣ್ಣ ಅಭ್ಯರ್ಥಿಯಾಗಿದ್ದಾರೆ.
ನಾಮ ಪತ್ರ ಸಲ್ಲಿಕೆ ವೇಳೆ ಸೂರಜ್ ರೇವಣ್ಣ ಜೊತೆ ತಂದೆ ರೇವಣ್ಣ, ತಾಯಿ ಭವಾನಿ, ಶಾಸಕರುಗಳಾದ ಎ.ಟಿ.ರಾಮಸ್ವಾಮಿ, ಸಿ.ಎನ್.ಬಾಲಕೃಷ್ಣ, ಶಿವಲಿಂಗೇಗೌಡ, ಲಿಂಗೇಶ್, ಕುಮಾರಸ್ವಾಮಿ ಸಂಸದ ಪ್ರಜ್ವಲ್ ಸಾಥ್ ನೀಡಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಘೋಷಣೆ ಬಾಕಿ ಇದೆ.
Advertisement. Scroll to continue reading.
ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14 ರಂದು ಮತಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.