ಮೈಸೂರು : ತನ್ನ 2 ವರ್ಷದ ಮಗುವನ್ನು ಸಾಯಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದ ಅನ್ನಪೂರ್ಣ (22) ತನ್ನ 2 ವರ್ಷದ ಮಗ ಮೋಕ್ಷಿತ್ ಮೃತಪಟ್ಟವರು.
ಅನ್ನಪೂರ್ಣ ತನ್ನ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅವರು 2 ವರ್ಷಗಳ ಹಿಂದೆ ಮಹದೇವ ಪ್ರಸಾದ್ ರನ್ನು ವಿವಾಹವಾಗಿದ್ದರು. ಕೌಟುಂಬಿಕ ಕಲಹದಿಂದ ಬೇಸತ್ತು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.