ದೆಹಲಿ : ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ 10ನೇ ಬಜೆಟ್ ಮತ್ತು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ನಾಲ್ಕನೇ ಬಜೆಟ್ ಇದಾಗಿದೆ.
ಕಳೆದ ವರ್ಷದಂತೆ ಈ ವರ್ಷವೂ ಕಾಗದ ರಹಿತ ಮಾದರಿಯಲ್ಲಿ ಬಜೆಟ್ ಮಂಡನೆಯಾಗಲಿದೆ. ಇಂದು ಬೆಳಗ್ಗೆ 11 ರಿಂದ ಸಂಸತ್ತಿನ ಅಧಿವೇಶನದಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.
ಕಳೆದ ವರ್ಷ ಸೀತಾರಾಮನ್ ಅವರ ಬಜೆಟ್ ಭಾಷಣವು ಭಾರತದ ಸಂಸತ್ತಿನ ಇತಿಹಾಸದಲ್ಲಿಯೇ ಸುದೀರ್ಘವಾಗಿತ್ತು. ಅವರ ಪ್ರಸ್ತುತಿಯ ಅವಧಿ 2 ಗಂಟೆ 40 ನಿಮಿಷಗಳಿಂದ ಕೂಡಿತ್ತು. ಈ ಬಾರಿ ಅಂದಾಜು 90 ರಿಂದ 120 ನಿಮಿಷಗಳ ಕಾಲ ಆಯವ್ಯಯ ಮಂಡಿಸಲಿದ್ದಾರೆ.
Advertisement. Scroll to continue reading.
ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಿಂದ ಫೆಬ್ರವರಿ 11 ರವರೆಗೆ ನಡೆಯುತ್ತದೆ. ದ್ವಿತೀಯಾರ್ಧವು ಮಾರ್ಚ್ 14 ರಿಂದ ಏಪ್ರಿಲ್ 8 ರವರೆಗೆ ಇರುತ್ತದೆ. ರಾಜ್ಯಸಭೆಯಲ್ಲಿ ಬಜೆಟ್ ಮಂಡಿಸುವ ಮೊದಲು ಸಂಸತ್ತಿನ ಕೆಳಮನೆ ಎನಿಸಿರುವ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ.