ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ನೂತನ ಪೊಲೀಸ್ ಠಾಣೆಯ ಕಟ್ಟಡಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನೀಲ್ ಕುಮಾರ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಹೆಬ್ರಿಯಲ್ಲಿ ಹಂತ ಹಂತವಾಗಿ ಎಲ್ಲ ಸರಕಾರಿ ಕಟ್ಟಡಗಳು ನಿರ್ಮಾಣಗೊಳ್ಳುತ್ತಿದೆ. ಹೊಸ ತಾಲ್ಲೂಕಾಗಿ ಹೆಬ್ರಿ ಘೋಷಣೆಯಾದ ಬಳಿಕ ಅತಿ ಶೀಘ್ರದಲ್ಲಿ ಸರಕಾರಿ ಕಟ್ಟಡಗಳು ನಿರ್ಮಾಣಗೊಂಡಿವೆ ಎಂದರು.
Advertisement. Scroll to continue reading.
ಅರ್ಚಕ ನಾಗರಾಜ್ ಜೋಯಿಸ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ವಿಜಯ್ ಪ್ರಸಾದ್, ಸರ್ಕಲ್ ಇನ್ಸ್ ಪೆಕ್ಟರ್ ಸಂಪತ್ ಕುಮಾರ್, ಹೆಬ್ರಿ ಠಾಣಾಧಿಕಾರಿ ಮಹೇಶ್ ಟಿ.ಎಮ್, ಪೋಲಿಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕುಂದಾಪುರದ ಉಪವಿಭಾಗದ ಅಸಿಸ್ಟೆಂಟ್ ಕಮಿಷನರ್ ಕೆ .ರಾಜು, ಹೆಬ್ರಿ ತಾಲ್ಲೂಕು ತಹಶೀಲ್ದಾರ್ ಪುರಂದರ್ ಕೆ. ಹಾಗೂ ಹೆಬ್ರಿ ಮತ್ತು ತಾಲ್ಲೂಕಿನ ವಿವಿಧ ಗ್ರಾಮ ಪಂ ಅಧ್ಯಕ್ಷರುಗಳು, ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.