ನವದೆಹಲಿ: ರಷ್ಯಾ – ಉಕ್ರೇನ್ ಯುದ್ಧ ತೀವ್ರಗೊಂಡಿದೆ. ಬಾಂಬ್, ಶೆಲ್ ದಾಳಿ ನಿರಂತರ ನಡೆಯುತ್ತಿದೆ. ರಷ್ಯಾದ ದಾಳಿಯಿಂದಾಗಿ ಉಕ್ರೇನ್ ನಲ್ಲಿದ್ದಂತ ಕರ್ನಾಟಕದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಭಾರತೀಯ ರಾಯಭಾರ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದೆ.
ರಷ್ಯಾ ಸೇನೆಯ ರಾಕೆಟ್ ದಾಳಿಯಿಂದಾಗಿ ಉಕ್ರೇನ್ ನಲ್ಲಿದ್ದ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ಖಚಿತ ಪಡಿಸಿದೆ.
Advertisement. Scroll to continue reading.
ಹಾವೇರಿ ಜಿಲ್ಲೆಯ ನವೀನ್ ಎಂಬ ವಿದ್ಯಾರ್ಥಿ ಮೃತ ವಿದ್ಯಾರ್ಥಿ. ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. ಮಂಗಳವಾರ ಬೆಳಗ್ಗೆ ತಿಂಡಿ ತರುವುದಕ್ಕಾಗಿ ಹೊರಗೆ ಹೋಗಿದ್ದ ವೇಳೆ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.