ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ.ಪೆರಾರಿವಾಳನ್‌ಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪೆರಾರಿವಾಳನ್ ಅವರ ನಡವಳಿಕೆ, ಅನಾರೋಗ್ಯ ಮಾತ್ರವಲ್ಲದೇ ಅವರು 30 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಯೇ ಕಳೆದಿದ್ದಾರೆ ಎಂಬ ಅಂಶಗಳನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.
ಪೆರಾರಿವಾಳನ್ ಅವರ ಜಾಮೀನು ಅರ್ಜಿಯನ್ನು ಕೇಂದ್ರ ಸರ್ಕಾರವು ಕಟುವಾಗಿ ವಿರೋಧಿಸಿತ್ತು. ಅದರ ಹೊರತಾಗಿಯೂ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡಿದೆ.
Advertisement. Scroll to continue reading.