ನವದೆಹಲಿ: ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವೈ ಅವರಿದ್ದ ದ್ವಿಸದಸ್ಯ ಪೀಠ, ವಿವಿಧ ಸಂಸ್ಥೆಗಳು ಮತ್ತು ಸರ್ಕಾರಗಳು ಲಸಿಕೆ ಹಾಕಿಸಿಕೊಳ್ಳದ ಜನರ ಮೇಲೆ ನಿರ್ಬಂಧಗಳನ್ನು ವಿಧಿಸಿರುವುದು ಸರಿಯಲ್ಲ. ಕೋವಿಡ್ ಪಾಸಿಟಿವ್ ಸಂಖ್ಯೆ ಕಡಿಮೆ ಇರುವವರೆಗೆ ರಾಜ್ಯ ಸರ್ಕಾರಗಳು ಅಂತಹ ನಿರ್ಬಂಧಗಳನ್ನು ತೆಗೆದುಹಾಕಬೇಕು ಎಂದು ಸೂಚಿಸಿದೆ ಎಂದು ವರದಿ ಉಲ್ಲೇಖಿಸಿದೆ.
ಕೋವಿಡ್-19 ಲಸಿಕೆಗಳು ಮತ್ತು ಲಸಿಕೆ ನಂತರದ ಪ್ರಕರಣಗಳ ಕ್ಲಿನಿಕಲ್ ಪ್ರಯೋಗಗಳ ಡೇಟಾವನ್ನು ಬಹಿರಂಗಪಡಿಸಲು ನಿರ್ದೇಶನಗಳನ್ನು ಕೋರಿ ಜಾಕೋಬ್ ಪುಲಿಯೆಲ್ ಅವರು ಸಲ್ಲಿಸಿದ ಮನವಿಯ ವಿಚಾರಣೆ ವೇಳೆ ನ್ಯಾಯಾಲಯವು ಹೇಳಿದೆ.
Advertisement. Scroll to continue reading.
ದೈಹಿಕ ಸ್ವಾಯತ್ತತೆ/ದೈಹಿಕ ಸಮಗ್ರತೆ ಸಾಂವಿಧಾನಿಕ ಹಕ್ಕು. ಆದ್ದರಿಂದ ಯಾವುದೇ ವ್ಯಕ್ತಿಯನ್ನು ಲಸಿಕೆ ಹಾಕಿಸಿಕೊಳ್ಳುವಂತೆ ಬಲವಂತಪಡಿಸಲು ಸಾಧ್ಯವಿಲ್ಲ. ಕೋವಿಡ್-19 ವ್ಯಾಕ್ಸಿನೇಷನ್‌ನ ಪ್ರತಿಕೂಲ ಘಟನೆಗಳ ದತ್ತಾಂಶವನ್ನು ಸಾರ್ವಜನಿಕಗೊಳಿಸುವಂತೆಯೂ ಕೋರ್ಟ್ ಕೇಂದ್ರಕ್ಕೆ ನಿರ್ದೇಶಿಸಿದೆ.
ಲಸಿಕೆ ಹಾಕಿದ ಜನರಿಗಿಂತ ಲಸಿಕೆ ಹಾಕದ ಜನರು ಹೆಚ್ಚು ವೈರಸ್ ಹರಡಲು ಕಾರಣರಾಗುತ್ತಾರೆ ಎಂಬುದನ್ನು ಸಾಬೀತುಪಡಿಸಲು ಸರ್ಕಾರಗಳು ಯಾವುದೇ ದಾಖಲೆಗಳನ್ನು ನೀಡಿಲ್ಲ. ಲಸಿಕೆ ಹಾಕದ ಜನರನ್ನು ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸದಂತೆ ನಿರ್ಬಂಧಿಸಬಾರದು ಎಂದೂ ಕೋರ್ಟ್ ಹೇಳಿದೆ ಎಂದು ವರದಿ ಮಾಡಲಾಗಿದೆ.
Advertisement. Scroll to continue reading.