ಉಡುಪಿ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶರಂ ಕೇಂದ್ರ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಮೋದ್ ಮಧ್ವರಾಜ್ ಗೆಲುವು ಕಂಡಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಬಳಿಕ 2018ರ ಚುನಾವಣೆಯಲ್ಲಿ ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.
Advertisement. Scroll to continue reading.
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, 2019ರ ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಆದರೆ, ಬಿಜೆಪಿಯ ಶೋಭಾ ಕರಂದ್ಲಾಜೆ ಎದುರು ಅವರು ಸೋಲು ಕಂಡಿದ್ದರು.