ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ಅನುಚ್ಛೇದ 142 ಪ್ರಕಾರ ಅಪರಾಧಿಯನ್ನು ಬಿಡುಗಡೆ ಮಾಡುವುದು ಸೂಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ.
ಮಾರ್ಚ್ 9, 2022 ರಂದು ಆದೇಶದ ಮೂಲಕ, ಸುಪ್ರೀಂ ಕೋರ್ಟ್ ಎಜಿ ಪೆರಾರಿವಾಲನ್ ಅವರಿಗೆ ಜಾಮೀನು ನೀಡಿತ್ತು.
Advertisement. Scroll to continue reading.
ಏಪ್ರಿಲ್ 27, 2022 ರಂದು, ಎಜಿ ಪೆರಾರಿವಾಲನ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದರಿಂದ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿತು.
ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರಾರಿವಾಲನ್ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.
Advertisement. Scroll to continue reading.