ಬೆಂಗಳೂರು : ವೇಗವಾಗಿ ಬಂದ ಕಾರೊಂದು ಪಾದಚಾರಿಗಳಿಗೆ, ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಮೃತಪಟ್ಟಿರುವ ಘಟನೆ ಕತ್ರಿಗುಪ್ಪೆಯಲ್ಲಿ ನಡೆದಿದೆ.
28 ವರ್ಷದ ಸುರೇಶ್ ಮೃತ ಯುವಕ. ಸಚಿನ್ ಮತ್ತು ಶೈಲೇಂದ್ರ ಗಂಭೀರವಾಗಿ ಗಾಯಗೊಂಡವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಮುಖೇಶ್ ಕಿರುತೆರೆ ಸಹಾಯಕ ನಿರ್ದೇಶಕ ಎಂದು ತಿಳಿದುಬಂದಿದೆ.
Advertisement. Scroll to continue reading.
ಶುಕ್ರವಾರ ಶೂಟಿಂಗ್ ಮುಗಿಸಿಕೊಂಡು ಬನಶಂಕರಿ ಕಡೆಯಿಂದ ಕಾರಿನಲ್ಲಿ ವೇಗವಾಗಿ ಬಂದ ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್, ನಾಲ್ವರು ಪಾದಾಚಾರಿಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪಾದಾಚಾರಿಗಳು ಮೇಲಕ್ಕೆ ಚಿಮ್ಮಿದ್ದಾರೆ. ಮಾತ್ರವಲ್ಲದೇ ಸ್ಥಳದಲ್ಲೇ ಇದ್ದ ಇನ್ನೊಂದು ಕಾರು ಹಾಗೂ ಬೈಕಿಗೂ ಡಿಕ್ಕಿಯಾಗಿದೆ.
ಮುಖೇಶ್ ನ ಅಜಾಗರೂಕ ಮತ್ತು ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಚಾಲಕ ಮುಖೇಶ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.