ಕ್ರಿಕೆಟ್ : ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,
ಇಷ್ಟು ವರ್ಷಗಳಿಂದ ಪ್ರೀತಿ ಮತ್ತು ಬೆಂಬಲ ನೀಡಿದಕ್ಕೆ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್ಗಾಗಿ ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ನನ್ನ ಆಟದ ವೃತ್ತಿಜೀವನಕ್ಕೆ ತೆರೆ ಎಳೆಯಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ತಂಡವು ಕೆಲವು ಪ್ರತಿಭಾವಂತ ಯುವ ಆಟಗಾರರ ಸಮರ್ಥ ಕೈಯಲ್ಲಿದೆ ಮತ್ತು ಭಾರತೀಯ ಕ್ರಿಕೆಟ್ನ ಭವಿಷ್ಯವು ಉಜ್ವಲವಾಗಿದೆ ಎಂದು ಅವರು ಹೇಳಿದ್ದಾರೆ.
Advertisement. Scroll to continue reading.
1999ರಲ್ಲಿ ತಮ್ಮ 16ನೇ ವಯಸ್ಸಿನಲ್ಲೇ ಐರ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಲೋಕಕ್ಕೆ ಪದಾರ್ಪಣೆ ಮಾಡಿದ್ದರು. 23 ವರ್ಷಗಳ ಕ್ರಿಕೆಟ್ ಆಟದ ಸುದೀರ್ಘ ಪ್ರಯಣಕ್ಕೆ ಇದೀಗ ಗುಡ್ ಬೈ ಹೇಳಿದ್ದಾರೆ. 39 ವರ್ಷದ ಮಿಥಾಲಿ ಭಾರತೀಯ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಮಾದರಿಯಲ್ಲಿ ಹಲವು ದಾಖಲೆ ನಿರ್ಮಿಸಿದ್ದಾರೆ.