ಕರಾಚಿ: ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ (78) ಇಂದು ನಿಧನರಾಗಿದ್ದಾರೆ.
ದುಬೈನಲ್ಲಿ ಇದ್ದಂತ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ಇಂದು ನಿಧನರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿತ್ತು.
Advertisement. Scroll to continue reading.
2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು.
ಪಾಕಿಸ್ತಾನದ ಮಿಲಿಟರಿ ಜನರಲ್ ಆಗಿದ್ದ ಪರ್ವೇಜ್ ಮುಷರಫ್ ನಂತರ ಬಲವಂತದಿಂದ ಪ್ರಧಾನಿ ಕೈಯಿಂದ ಅಧಿಕಾರ ಕಿತ್ತುಕೊಂಡವರು. ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಲಿಟರಿ ಆಡಳಿತವನ್ನು ತಂದ ಅವರು, ನಂತರ ಅಧ್ಯಕ್ಷರಾಗಿ ಆಯ್ಕೆಯಾದರು. ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪಗಳಿದ್ದವು. ಅಧಿಕಾರ ಕಳೆದುಕೊಂಡ ನಂತರ ಪಾಕಿಸ್ತಾನ ತೊರೆದು ದುಬೈನಲ್ಲಿ ನೆಲೆಸಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಅವರು ದುಬೈನಲ್ಲಿ ಆಸ್ಪತ್ರೆ ಸೇರಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Advertisement. Scroll to continue reading.