ಮೂಲ್ಕಿ : ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು,ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೂಲ್ಕಿಯಲ್ಲಿ ನಡೆದಿದೆ.
ಕೊಳಕ್ಕಾಡಿ ನಿವಾಸಿ ಮನೀಷ್ ಮೃತ ವಿದ್ಯಾರ್ಥಿ. ಮೂಲ್ಕಿಯ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ಬಿಸಿಎ ವಿದ್ಯಾರ್ಥಿಯಾಗಿದ್ದಾನೆ ಎನ್ನಲಾಗಿದೆ.
ಇನ್ನೊಂದು ಬೈಕ್ ನಲ್ಲಿದ್ದ ಅದೇ ಕಾಲೇಜಿನ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.
ಅಪಘಾತದ ತೀವ್ರತೆಗೆ ಮನೀಷ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ದೀಕ್ಷಿತ್ ಕಾಲು ತುಂಡಾಗಿದೆ ಎನ್ನಲಾಗಿದೆ.
ಸಂಚಾರಿ ಉತ್ತರ ವಲಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.