ಉಡುಪಿ: ನಿನ್ನೆಯಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಉಡುಪಿ ಮಂಗಳೂರಿನ ಜನ ಜೀವನ ಅಸ್ತವ್ಯಸ್ತವಾಗಿದೆ. ಮಂಗಳೂರಿನಲ್ಲಿ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ.
ನಾಳೆಯೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶಿಸಿದ್ದಾರೆ.
Advertisement. Scroll to continue reading.