ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
24 ಗಂಟೆಯಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹಾಗಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Advertisement. Scroll to continue reading.