ಅಂತಾರಾಷ್ಟ್ರೀಯ

ಶ್ರೀಲಂಕಾ ಬಿಕ್ಕಟ್ಟು: ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಬೆನ್ನಲ್ಲೇ ರನಿಲ್ ನಿವಾಸಕ್ಕೆ ಬೆಂಕಿ

1

ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ನಲುಗುಗಿರುವ ಶ್ರೀಲಂಕಾದಲ್ಲಿ ನಾಗರಿಕರನ್ನು ನಿಯಂತ್ರಿಸಲು ಅಸಾಧ್ಯವಾಗುತ್ತಿದೆ. ಈಗಾಗಲೇ ಅಧ್ಯಕ್ಷರ ನಿವಾಸವನ್ನು ಆಕ್ರಮಿಸಿಕೊಂಡ ಪ್ರತಿಭಟನಾಕಾರರ ಗುಂಪು ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಿದೆ.

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದಿದ್ದಂತ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ನಡುವೆಯೂ ಶ್ರೀಲಂಕಾದಲ್ಲಿ ಪ್ರತಿಭಟನೆ ಮುಂದುವರೆದಿದೆ.

ಶ್ರೀಲಂಕಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿರುವಂತ ಪ್ರತಿಭಟನಾಕಾರರು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘ ನಿವಾಸಕ್ಕೆ ಇದೀಗ ಬೆಂಕಿ ಹಚ್ಚಿರುವ ಬಗ್ಗೆ ವರದಿ ಆಗಿದೆ.

Advertisement. Scroll to continue reading.

ಪ್ರತಿಭಟನಾಕಾರರು ಹಚ್ಚಿದಂತ ಬೆಂಕಿಯಿಂದಾಗಿ, ಶ್ರೀಲಂಕಾ ರನಿಲ್ ವಿಕ್ರಮಸಿಂಘಿ ನಿವಾಸ ಧಗಧಗಿಸಿ ಹೊತ್ತಿ ಉರಿಯುತ್ತಿದೆ.

ಆದರೆ ಇದಕ್ಕೂ ಮುನ್ನ ಭದ್ರತಾ ಸಿಬ್ಬಂದಿ ಹಾಗೂ ಜನಸಮೂಹದ ನಡುವೆ ಮಾತಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಉದ್ರಿಕ್ತರನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರೂ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com