ಶಿವಮೊಗ್ಗ : ಶಿಕಾರಿಪುರ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕಾರಿಪುರ ಕ್ಷೇತ್ರ ಖಾಲಿ ಮಾಡಿರುವುದರಿಂದ ವಿಜಯೇಂದ್ರ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿತ್ತು. ಆದರೆ ಇಲ್ಲಿ ಸ್ಥಾನ ತೆರವಾಗುವುದರಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಈ ಕ್ಷೇತ್ರದ ಜನತೆ ಬಿ.ವೈ. ವಿಜಯೇಂದ್ರಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಬಿ.ಎಸ್. ಯಡಿಯೂರಪ್ಪ ಅವರ ಈ ನಡೆ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನ ಹುಟ್ಟಿಸಿದೆ.
Advertisement. Scroll to continue reading.