ದಕ್ಷಿಣ ಕನ್ನಡ : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಹೊಸ ಮನೆ ಕಟ್ಟಿಸಬೇಕು ಎಂಬುದಾಗಿ ಖರೀದಿಸಲಾಗಿದ್ದಂತ ಜಾಗದಲ್ಲಿಯೇ ನೆರವೇರಿಸಲಾಗಿದೆ. ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ. ಈ ಸಮಯದಲ್ಲಿ ಪ್ರವೀಣ್ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರವೀಣ್ ಹತ್ಯೆ ಖಂಡಿಸಿ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಲಾಗಿದೆ. ಹೀಗಾಗಿ ಬೆಳ್ಳಾರೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
Advertisement. Scroll to continue reading.