ದಕ್ಷಿಣಕನ್ನಡ : ಮಂಗಳೂರಿನ ಸುರತ್ಕಲ್ ಬಳಿ ಫಾಜಿಲ್ ಹತ್ಯೆ ಸಂಬಂಧಿಸಿ ಪೊಲೀಸರಿಂದ 13-14 ಜನರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಂಗಳೂರಿನಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬೆನ್ನಲ್ಲೇ ಮತ್ತೊಂದು ಕೊಲೆ ನಡೆದಿದೆ. ಸುರತ್ಕಲ್ ನಲ್ಲಿ ನಿನ್ನೆ ಗುರುವಾರ ರಾತ್ರಿ ಯುವಕನೊಬ್ಬನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಹತ್ಯೆ ಮಾಡಲಾಗಿದೆ.
ಮಂಗಳ ಪೇಟೆಯ ಫಾಜಿಲ್ ಎಂಬ ಯುವಕನನ್ನು ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
Advertisement. Scroll to continue reading.
ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ನನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಸಾವನ್ನಪ್ಪಿದ್ದಾರೆ. ಕರಾವಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.