ಕಾಮನ್‌ವೆಲ್ತ್ ಗೇಮ್ಸ್ 2022: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ಮೊದಲ ಸೆಮಿಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಪದಕವನ್ನು ಖಚಿತಪಡಿಸಿದೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಗೇಮ್ಸ್‌ನ ಫೈನಲ್‌ಗೆ ಪ್ರವೇಶಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ಮೊದಲ ಸೆಮಿಫೈನಲ್‌ನಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು 4 ರನ್‌ಗಳ ಅಂತರದಿಂದ ಸೋಲಿಸಿದೆ. .
ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಭಾರತದ ಪರ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅತ್ಯುತ್ತಮ ಇನ್ನಿಂಗ್ಸ್ ಆಡಿ 62 ರನ್ ಗಳಿಸಿದರು. ಸ್ಮೃತಿ ಹೊರತಾಗಿ, ಟೀಂ ಇಂಡಿಯಾದಿಂದ ಕೊನೆಯ ಓವರ್‌ಗಳಲ್ಲಿ ಜೆಮಿಮಾ ರೋಡ್ರಿಗಸ್ ಬಿರುಸಿನ ಬ್ಯಾಟಿಂಗ್ ಮಾಡಿ ತಂಡವನ್ನು ಉತ್ತಮ ಸ್ಕೋರ್‌ನತ್ತ ಕೊಂಡೊಯ್ದರು.
Advertisement. Scroll to continue reading.