ವಿಟ್ಲ : ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಸಿಲುಕಿ ಮೃತಪಟ್ಟ ಘಟನೆ ಅನಂತಾಡಿ ಗ್ರಾಮದ ಬಂಟ್ರಿಂಜದಲ್ಲಿ ನಡೆದಿದೆ.
ಅನಂತಾಡಿ ಗ್ರಾಮದ ಬಂಟ್ರಿಂಜ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ ಲಿಖಿತಾ (11) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಬಾಲಕಿ ಬಾಬುಕಟ್ಟೆ ಶಾಲೆಯ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ತಾಯಿ ಚಂದ್ರವಾತಿ ದಿನಸಿ ಸಾಮಾಗ್ರಿ ತರಲೆಂದು ಹತ್ತಿರದ ಅಂಗಡಿಗೆ ತೆರಳಿದ್ದಾಗ ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿಗೆ ಕಟ್ಟಿದ ಹಗ್ಗ ಆಕೆಯ ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.