ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಮುಂದಿನ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.
ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎಂದು ಹೇಳಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
Advertisement. Scroll to continue reading.
ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾದ್ಯಂತ ವ್ಯಾಪಿಸಿತ್ತು. ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್, ಮಾರ್ಚ್ 15ರ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಕರ್ನಾಟಕಕ್ಕೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.
Advertisement. Scroll to continue reading.