ಬಾರಕೂರು : ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ : ಧಾರ್ಮಿಕ ಸಭಾ ಕಾರ್ಯಕ್ರಮ
Published
2
ವರದಿ : ಬಿ.ಎಸ್.ಆಚಾರ್ಯ
ಬಾರಕೂರು : ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಶೆಟ್ಟಿಗಾರ್ ಇಂಡಸ್ಟ್ರೀಸ್ ರಂಗನಕೆರೆ ಬಾರಕೂರಿನಲ್ಲಿ ನಾನಾ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಗಣೇಶೋತ್ಸವ ೩ ದಿನ ಜರುಗಿತು.
ಗುರುವಾರ ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
Advertisement. Scroll to continue reading.
ಈ ಸಂದರ್ಭ ಬಾರಕೂರು ಗ್ರಾಮ ಪಂಚಾಯತಿ ಅಧ್ಯಕ್ಷ ಬಾರಕೂರು ಶಾಂತಾರಾಮ ಶೆಟ್ಟಿ ಮಾತನಾಡಿ, ದೇಶದ ಸ್ವಾತಂತ್ರ್ಯದ ಹೋರಾಟಕ್ಕೆ ಜನರನ್ನು ಒಂದುಗೂಡಿಸಲು ಮತ್ತು ಧಾರ್ಮಿಕ ಭಾವನೆಯನ್ನು ಹೆಚ್ಚಿಸಲು ಮಾಡಲಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಧಾರ್ಮಿಕತೆಗೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕಾಗಿದೆ. ವಿಸರ್ಜನಾ ಮೆರವಣಿಗೆಯಲ್ಲಿ ಕೂಡಾ ಭಜನೆಯಂತ ಕಾರ್ಯಕ್ರಮ ಹಮ್ಮಿಕೊಳ್ಳುವುದು ಉತ್ತಮ ಎಂದರು.
ಇದೇ ಸಂದರ್ಭದಲ್ಲಿ ನಾನಾ ಕ್ಷೇತ್ರದ ಸಾಧಕರಾದ ಬ್ರಹ್ಮಾವರ ಸಬ್ ರಿಜಿಸ್ಟಾರ್ ಕೀರ್ತಿ ಕುಮಾರಿ, ಮೂಲ್ಕಿ ಶ್ರೀ ಮಹಮ್ಮಾಯಿ ವೀರಭದ್ರ ದೇವಸ್ಥಾನದ ಆಡಳಿತ ಮೋಕ್ತೇಸರ ಪುರಂದರ ಡಿ. ಶೆಟ್ಟಿಗಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ವಿಭಾಗದ ಪ್ರಾದೇಶಿಕ ನಿರ್ದೇಶಕ ಗಣೇಶ್ ಬಿ., ಕೃಷಿಯ ಸಾಧಕ ಕೂಡ್ಲಿ ಶ್ರೀನಿವಾಸ ಉಡುಪ, ಕರಾವಳಿ ಕಾವಲು ಪಡೆಯ ಮಲ್ಪೆ ಪೋಲೀಸ್ ಠಾಣೆಯ ಏ. ಎಸ್. ಐ. ಭಾಸ್ಕರ ಶೆಟ್ಟಿಗಾರ್, ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಂಜೀವ ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು.
ಈ ವೇಳೆ ವಿದ್ಯಾರ್ಥಿಗಳಿಗೆ ಮತ್ತು ಅಶಕ್ತರಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್, ಅಧ್ಯಕ್ಷ ಉಮೇಶ್ ಆಚಾರ್ಯ, ಚಂದ್ರಶೇಖರ ಶೆಟ್ಟಿ , ಜಯರಾಮ್ ಶೆಟ್ಟಿಗಾರ, ಸೀತಾರಾಮ ಶೆಟ್ಟಿ , ಸಿ ಏ ಗಣೇಶ್ ಕಾಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.