ಕರಾವಳಿ

ಬೈಂದೂರು : ಅಂಡರ್‌ಪಾಸ್, ರಸ್ತೆ ಸುರಕ್ಷತೆ ಕ್ರಮಕ್ಕಾಗಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

2

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರ ತಲ್ಲೂರು, ಹೆಮ್ಮಾಡಿ, ತ್ರಾಸಿ, ಯಡ್ತರೆ ಬೈಪಾಸ್, ಬೈಂದೂರು ತಾಲೂಕು ಕಛೇರಿ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಹಾಗೂ ಮರವಂತೆ ಬೀಚ್ ಬಳಿ ರಸ್ತೆ ಸುರಕ್ಷತೆ ಹಾಗೂ ಸುಂದರೀಕರಣ ಮಾಡಲು ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದರು.


ಇದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಿಂದ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಚೀಫ್ ಜನರಲ್ ಮ್ಯಾನೇಜರ್ ವಿಶಾಲ್ ಗುಪ್ತಾ ಅವರು ಬೈಂದೂರು ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು.

Advertisement. Scroll to continue reading.


ಅವರೊಂದಿಗೆ ಸ್ಥಳೀಯರಾದ ಉದ್ಯಮಿ ವೆಂಕಟೇಶ್ ಕಿಣಿ, ಮಂಗಳೂರು ವಿಭಾಗದ ಪಿ.ಡಿ ಲಿಂಗೇಗೌಡ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕರಿಗಳು ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com