ನವದೆಹಲಿ : ಶಾಲಾ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ನಲ್ಲಿ ನಡೆಯುತ್ತಿರುವ ಅರ್ಜಿ ವಿಚಾರಣೆ ಸೆ. 7ಕ್ಕೆ ಮುಂದೂಡಲಾಗಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ ಸೆ. 7ಕ್ಕೆ ಮುಂದೂಡಿ ಆದೇಶಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್, ಸಾಂವಿಧಾನಿಕ ಮಹತ್ವದ ಇಂತಹ ವಿಷಯವನ್ನು non-miscellaneous day ದಿನದಂದು ವಿಚಾರಣೆ ನಡೆಸಬೇಕು ಎಂದು ಹೇಳಿದರು. ಕರ್ನಾಟಕ ರಾಜ್ಯದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸೋಮವಾರ ವಿಚಾರಣೆಯನ್ನು ಮುಂದೂಡುವಂತೆ ಅರ್ಜಿದಾರರ ಮನವಿಯನ್ನು ವಿರೋಧಿಸಿದರು.
Advertisement. Scroll to continue reading.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ರಾಜ್ಯದ ನಿಷೇಧವನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆಗಸ್ಟ್ 29 ರಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿತ್ತು.