ನವದೆಹಲಿ: ನಾಯಕ ರೋಹಿತ್ ಶರ್ಮಾ (Rohit Sharma) ಸ್ಫೋಟಕ ಶತಕ, ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಭಾರತ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 8 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿತು. 273 ರನ್‌ಗಳ ಸವಾಲನ್ನು ಪಡೆದ ಭಾರತ 35 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 273 ರನ್ ಹೊಡೆಯುವ ಮೂಲಕ ಗುರಿಯನ್ನು ತಲುಪಿತು.
ರನ್ ಚೇಸ್ ವೇಳೆ ಆರಂಭಿಕರಾದ ರೋಹಿತ್ ಹಾಗೂ ಕಿಶನ್ ಶತಕದ ಜತೆಯಾಟವಾಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 156ರನ್ ಪೇರಿಸಿತು.
Advertisement. Scroll to continue reading.
ಇಶನ್ ಕಿಶನ್ 47 ರನ್ (47 ಎಸೆತ, 5 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ, ರೋಹಿತ್ ಶರ್ಮಾ 131 ರನ್ (84 ಎಸೆತ, 16 ಬೌಂಡರಿ, 5 ಸಿಕ್ಸರ್) ಸಿಡಿಸಿ ಬೌಲ್ಡ್ ಆದರು.
ಮೂರನೇ ವಿಕೆಟಿಗೆ ಜತೆಯಾದ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 68 ರನ್ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ವಿರಾಟ್ ಕೊಹ್ಲಿ ಔಟಾಗದೇ 55 ರನ್ (56 ಎಸೆತ, 6 ಬೌಂಡರಿ), ಶ್ರೇಯಸ್ ಅಯ್ಯರ್ ಔಟಾಗದೇ 25 ರನ್ (23 ಎಸೆತ, 1 ಬೌಂಡರಿ, 1 ಸಿಕ್ಸರ್) ಹೊಡೆದರು.
Advertisement. Scroll to continue reading.