ಗದಗ: ನಡು ರಸ್ತೆಯಲ್ಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ.
ಗದಗ ಜಿಲ್ಲೆಯ ಹಳೇ ಬಸ್ ನಿಲ್ದಾಣದ ರಸ್ತೆಯಲ್ಲೇ ಈ ಕೃತ್ಯ ನಡೆದಿದೆ.
ಇಬ್ಬರು ಸ್ನೇಹಿತರು ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಜಗಳ ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.
Advertisement. Scroll to continue reading.
ಈ ಸಂದರ್ಭದಲ್ಲಿ ಸುನೀಲ್ ಎಂಬಾತನಿಗೆ ಆತನ ಸ್ನೇಹಿತನೇ ದೇವು ಎಂಬಾತ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಬಿಡದೇ, ಮತ್ತೆ ಮತ್ತೆ ಚಾಕುವಿನಿಂದ ಚುಚ್ಚಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಗದಗ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.
ರಕ್ತದ ಮಡುವಿನಲ್ಲಿ ಬಿದ್ದು ತೀವ್ರ ಅಸ್ವಸ್ಥಗೊಂಡಂತ ಸುನೀನ್ ನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
Advertisement. Scroll to continue reading.