ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ಭಾರೀ ಅಗ್ನಿ ದರುಂತವೊಂದು ಸಂಭವಿಸಿದೆ. ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಸಿಲಿಂಡರ್ ಸ್ಟೋಟಗೊಂಡಿದೆ. ಪರಿಣಾಮ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಜಿಗಿದಿದ್ದಾರೆ. ಅಲ್ಲದೇ, ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮಹಡಿಯಲ್ಲಿ ಹಲವಾರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿದ್ದ ‘ಹುಕ್ಕಾ ಬಾರ್ ಮತ್ತು ಕೆಫೆ’ಯಲ್ಲಿ ಮಧ್ಯಾಹ್ನದ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
Advertisement. Scroll to continue reading.
ಸುತ್ತಮುತ್ತಲಿನ ಜನರಿಗೆ ಸ್ಫೋಟದಂತಹ ಶಬ್ದ ಕೇಳಿದೆ. ನಾವು ಎಂಟು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಿದ್ದೇವೆ ಮತ್ತು ನಮ್ಮ ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದಾರೆ. ಬೆಂಕಿಯನ್ನು ನಂದಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಕಟ್ಟಡದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಜನರು ತಕ್ಷಣ ಎಚ್ಚರಿಕೆ ನೀಡಿ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಆ ಸಮಯದಲ್ಲಿ ಕೆಫೆಯಲ್ಲಿ ಗ್ರಾಹಕರು ಇರಲಿಲ್ಲ.
Advertisement. Scroll to continue reading.