ಇಸ್ರೋದ ಗಗನಯಾನ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ಉಡಾವಣೆಯಾಗಿದ್ದು, ಯಶಸ್ವಿಯಾಗಿ ಮಾನವ ರಹಿತ ಗಗನಯಾನ ನೌಕೆ ಪ್ರಯೋಗ ಯಶಸ್ವಿಯಾಗಿದೆ.
ಸತೀಶ್ ಧವನ್ ಬಾಹ್ಯಾಕಾಶದಿಂದ ನೌಕೆ ಉಡಾವಣೆಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಆಂಧ್ರದ ಶ್ರೀಹರಿ ಕೋಟದಲ್ಲಿರುವ ಧವನ್ ಬಾಹ್ಯಾಕಾಶ ಕೇಂದ್ರ ಮಾನವ ಸಹಿತ ಗಗನ ಯೋಜನೆಯ ನೌಕೆ ಪ್ರಯೋಗ ನಡೆಸಿದೆ. ರಾಕೆಟ್ ನಿಂದ ಎರಡು ಮಾಡೆಲ್ ಗಳು ಪ್ರತ್ಯೇಕಗೊಂಡಿವೆ.
3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್ ಸೇಫ್ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.
Advertisement. Scroll to continue reading.
ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು.