ಬೆಂಗಳೂರು : ಕಳೆದ ಭಾನುವಾರ ಲೂಲು ಮಾಲ್ನಲ್ಲಿ ವ್ಯಕ್ತಿಯೊಬ್ಬ ಯುವತಿ ಮೈಮುಟ್ಟಿ ವಿಕೃತಿ ಮೆರೆದಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದು ಆಕ್ರೋಶಕ್ಕೂ ಕಾರಣವಾಗಿತ್ತು. ಈ ವಿಡಿಯೋವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ ಮಾಲ್ ಮ್ಯಾನೇಜರ್ನಿಂದ ಕೇಸ್ ಪಡೆದು ತನಿಖೆಗೆ ಇಳಿದಿದೆ.
ಇದೀಗ ವಿಕೃತಿ ಮೆರೆದ ವ್ಯಕ್ತಿ ಯಾರೆಂಬುದು ಪತ್ತೆಯಾಗಿದೆ.
ದುರಂತವೆಂದರೆ ಮಕ್ಕಳಿಗೆ ಪಾಠ ಮಾಡಿದ್ದ ಶಿಕ್ಷಕನೇ ಈ ವಿಕೃತಿ ಮೆರೆದಿರೋದು. ಹೌದು, ನಿವೃತ್ತಿ ಮುಖ್ಯ ಶಿಕ್ಷಕ ಅಶ್ವತ್ ನಾರಾಯಣ(60) ಈ ಕೃತ್ಯ ಎಸಗಿತ ಆರೋಪಿ. ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದುಬಂದಿದೆ.
Advertisement. Scroll to continue reading.
ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ ಅಶ್ವಥ್ ನಾರಾಯಣ್, ಸದ್ಯ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ.
ಸದ್ಯ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Advertisement. Scroll to continue reading.