ರಾಜ್ಯ

ಬೆಂಗಳೂರು : ಸೆರೆ ಸಿಕ್ಕಿದ್ದ ಚಿರತೆ ಗುಂಡೇಟಿಗೆ ಬಲಿ

1

ಬೆಂಗಳೂರು :  ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಸೆರೆಯಾಗಿತ್ತು. ಆದರೆ, ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದೆ ಎಂದು ತಿಳಿದುಬಂದಿದೆ.

ಬುಧವಾರ ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಕೃಷ್ಣಾರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು.

Advertisement. Scroll to continue reading.

ಗುರುವಾರ ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಅದರ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಸಾವನ್ನಪ್ಪಿದೆ.

ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬಳಿಕ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು. 

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com