ರಾಷ್ಟ್ರೀಯ

ನೇಪಾಳದಲ್ಲಿ ಪ್ರಬಲ ಭೂಕಂಪ; 120 ಕ್ಕಿಂತ ಅಧಿಕ ಮಂದಿ ಸಾವು, ದೆಹಲಿಯಲ್ಲೂ ಕಂಪಿಸಿದ ಭೂಮಿ

1

ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ಅಕ್ಷರಶಃ ನಲುಗಿ ಹೋಗಿದೆ. ಭೂಕಂಪದ ಪರಿಣಾಮ 120 ಕ್ಕೂ ಅಧಿಕ ಮದಿ ಸಾವನ್ನಪ್ಪಿದ್ದಾರೆ. ಅಲ್ಲದೇ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ

ನೇಪಾಳದ ಪಶ್ಚಿಮ ಗಡಿ ಭಾಗದಲ್ಲಿ ನೆಲಮಟ್ಟದಿಂದ ಭೂಮಿಯ ಒಳಗೆ ಸುಮಾರು 18 ಕಿ.ಮೀ. ದೂರದಲ್ಲಿ ಕಂಪನ ಕೇಂದ್ರ ಸ್ಥಾನವಿತ್ತು. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯನ್ನು ಈ ಕಂಪನಗಳು ಹೊಂದಿದ್ದವು ಎಂದು ಅಮೆರಿಕದ ಜಿಯೋಲಜಿಕಲ್ ಸರ್ವೆ ಇಲಾಖೆ ಮಾಹಿತಿ ನೀಡಿದೆ.

ಕಂಪಿಸಿದ ದೆಹಲಿ :

Advertisement. Scroll to continue reading.

ಈ ನಡುವೆ ಕಂಪನದ ಕೇಂದ್ರ ಸ್ಥಾನದಿಂದ ಅಂದಾಜು 500 ಕಿ.ಮೀ. ದೂರವಿರುವ, ಭಾರತದ ರಾಜಧಾನಿ ದೆಹಲಿಯಲ್ಲೂ ಕಂಪನದ ಅನುಭವಗಳಾಗಿವೆ. ಆದರೆ, ಯಾವುದೇ ಕಟ್ಟಡ ಹಾನಿ ಅಥವಾ ಸಾವು ನೋವು ಸಂಭವಿಸಿಲ್ಲ. ದೆಹಲಿ – ರಾಷ್ಟ್ರ ರಾಜಧಾನಿ ಪ್ರಾಂತ್ಯ (ದೆಹಲಿ – ಎನ್ ಸಿಆರ್) ಹಾಗೂ ನೊಯ್ಡಾ ಮುಂತಾದ ಕಡೆಗಳಲ್ಲಿ ಕಂಪನದ ಅನುಭವ ಉಂಟಾಗಿದೆ ಎಂದು ತಿಳಿದುಬಂದಿದೆ.

ತಕ್ಷಣದ ರಕ್ಷಣೆ ಮತ್ತು ಪರಿಹಾರಕ್ಕಾಗಿ ಎಲ್ಲಾ 3 ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ ಎಂದು ನೇಪಾಳ ಪಿಎಂಒ ಟ್ವೀಟ್ ಮಾಡಿದೆ. ನೇಪಾಳದಲ್ಲಿ ಭೂಕಂಪದಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ.

ಶುಕ್ರವಾರ ರಾತ್ರಿ 11:47 ಕ್ಕೆ ಜಜರ್ಕೋಟ್‌ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಸಾವು- ನೋವಿನ ಬಗ್ಗೆ ಪ್ರಧಾನಿ ಪುಷ್ಪ ಕಮಲ್ ದಹಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನೇಪಾಳದಲ್ಲಿ ಸಂಭವಿಸಿದ ಈ ಪ್ರಬಲ ಭೂಕಂಪದಿಂದಾಗಿ ಭಾರತದ ಜನರೂ ಭಯಭೀತರಾಗಿದ್ದಾರೆ. ರಾತ್ರಿ 11.32ರ ಸುಮಾರಿಗೆ ಭೂಕಂಪ ಸಂಭವಿಸಿದ್ದರಿಂದ ಜನರು ಮನೆಯಿಂದ ಹೊರ ಬರಬೇಕಾಯಿತು. ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್‌ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದುವು ನೇಪಾಳದ ಅಯೋಧ್ಯೆಯ ಉತ್ತರಕ್ಕೆ 227 ಕಿಮೀ ಮತ್ತು ಕಠ್ಮಂಡುವಿನಿಂದ 331 ಕಿಮೀ ಪಶ್ಚಿಮ ವಾಯುವ್ಯದಲ್ಲಿ 10 ಕಿಮೀ ಆಳದಲ್ಲಿದೆ.

Advertisement. Scroll to continue reading.

ನೇಪಾಳದಲ್ಲಿ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿಯ ಪಕ್ಕದಲ್ಲಿರುವ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದ್ದು, ಬಹುಮಹಡಿ ಕಟ್ಟಡಗಳಲ್ಲಿ ವಾಸಿಸುವ ಅನೇಕ ಜನರು ಹೊರಬಂದಿದ್ದಾರೆ.

ಉತ್ತರ ಪ್ರದೇಶದ ಲಕ್ನೋ, ಬಸ್ತಿ, ಬಾರಾಬಂಕಿ, ಫಿರೋಜಾಬಾದ್, ಅಮೇಥಿ, ಗೊಂಡಾ, ಪ್ರತಾಪಗಢ, ಭದೋಹಿ, ಬಹ್ರೈಚ್, ಗೋರಖ್‌ಪುರ ಮತ್ತು ಡಿಯೋರಿಯಾ ಜಿಲ್ಲೆಗಳಲ್ಲಿ ಭೂಕಂಪನದ ಅನುಭವವಾಗಿದೆ, ಜೊತೆಗೆ ಬಿಹಾರದ ಕತಿಹಾರ್, ಮೋತಿಹಾರಿ ಮತ್ತು ಪಾಟ್ನಾದಲ್ಲೂ ಭೂಮಿ ನಡುಗಿದ ಅನುಭವವಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com