ಬೆಂಗಳೂರು: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು ಮತ್ತು ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದಕ್ಕಾಗಿ ತನಿಖಾಧಿಕಾರಿ ಮತ್ತು ಪ್ರಾಸಿಕ್ಯೂಷನ್ ಅನ್ನು ತರಾಟೆಗೆ ತೆಗೆದುಕೊಂಡಿತ್ತು. ತನಿಖೆಗೆ ಅಡ್ಡಿಪಡಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿತ್ತು.
ಈ ತೀರ್ಪಿನ ನಾಲ್ಕು ತಿಂಗಳ ನಂತರ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿಬಿಐಗೆ ಕೆಳ ನ್ಯಾಯಾಲಯವು 60 ದಿನಗಳ ಕಾಲಾವಕಾಶ ನೀಡಿತ್ತು
Advertisement. Scroll to continue reading.
ಸದ್ಯ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದು ತಜ್ಞರು ಹೇಳಿದ್ದಾರೆ.
ಪ್ರಕರಣದಲ್ಲಿ ಖುಲಾಸೆಗೊಂಡಿರುವ ಸಂತೋಷ್ ರಾವ್ ಅವರೇ ನಿಜವಾದ ಅಪರಾಧಿ ಎಂದು ಸಿಬಿಐ ಹೇಳಿಕೊಂಡಿದ್ದು, ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅಗತ್ಯ ಸಾಕ್ಷ್ಯಾಧಾರಗಳನ್ನು ಸಲ್ಲಿಸುವುದಾಗಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಶ್ರೀ ಧರ್ಮಸ್ಥಳ ಮಂಜುನಾಥ ಕಾಲೇಜಿನಲ್ಲಿ 12ನೇ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ತರಗತಿಯನ್ನು ಮುಗಿಸಿ ಆಕೆಯ ಮನೆಯ ಕಡೆಗೆ ಹೋಗುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು ಮತ್ತು ನಂತರ ಆಕೆಯ ಮೃತದೇಹವು ವಿವಸ್ತ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
Advertisement. Scroll to continue reading.