ಭಾರತ ಕ್ರಿಕೆಟ್ ತಂಡ ನಾಲ್ಕನೇ ಬಾರಿ ವಿಶ್ವಕಪ್ ಫೈನಲ್ ತಲುಪಿದೆ. ಈ ಬಾರಿಯ ಸೆಮಿಫೈನಲ್‌ನಲ್ಲಿ ಬ್ಯಾಟ್ಸ್‌ಮನ್‌ಗಳ ಅದ್ಭುತ ಆಟ ಹಾಗೂ ಶಮಿ ಘಾತಕ ಬೌಲಿಂಗ್ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಮಣಿಸಿತು.
ಈ ಪಂದ್ಯದಲ್ಲಿ ಭಾರತದ ಆಟಗಾರರು ಹಲವಾರು ದಾಖಲೆಗಳನ್ನು ಬರೆದರು. ಅವುಗಳು ಹೀಗಿವೆ.
ಒಂದೇ ವಿಶ್ವಕಪ್‌ನಲ್ಲಿ ಮೂರು ಬಾರಿ ಐದು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಶಮಿ ಪಾತ್ರರಾದರು.
ವಿಶ್ವಕಪ್ ನಾಕೌಟ್‌ನಲ್ಲಿ ಬೆಸ್ಟ್ ಬೌಲಿಂಗ್ ಹೆಸರು ಕೂಡ ಶಮಿ (7/57) ಪಾಲಾಯಿತು. ಈ ಮೊದಲು ಈ ದಾಖಲೆ ಆಸ್ಟ್ರೇಲಿಯಾದ ಗ್ಯಾರಿ ಗಿಲ್ಮೋರ್ (6/14) ಹೆಸರಲಿತ್ತು.
ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಐದು ವಿಕೆಟ್ ಮೊಹಮ್ಮದ್ ಶಮಿ ವಿಶ್ವಕಪ್‌ನಲ್ಲಿ 4 ಬಾರಿ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಮಿಚೆಲ್ ಸ್ಟಾರ್ಕ್ ಹೆಸರಲ್ಲಿದ್ದ ದಾಖಲೆಯನ್ನು ಮುರಿದರು.
ವಿಶ್ವಕಪ್ ಒಂದರಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಶಮಿ (23) ಪಾಲಾಯಿತು. ಈ ಮೊದಲು 2011ರ ವಿಶ್ವಕಪ್‌ನಲ್ಲಕ ಜಹೀರ್ ಖಾನ್ 21 ವಿಕೆಟ್ ಕಬಳಿಸಿದ್ದರು.
ಸೆಮಿಫೈನಲ್‌ನಲ್ಲಿ ಶತಕ ಪೂರೈಸುವುದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ 49 ಶತಕಗಳನ್ನು ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಇದೀಗ 50ನೇ ಸೆಂಚುರಿ ಸಿಡಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಈ ಮ್ಯಾಚ್ನಲ್ಲಿ ವಿರಾಟ್ ಕೊಹ್ಲಿ 80 ರನ್ ಪೂರೈಸಿದಾಗ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದರು. ಈ ದಾಖಲೆ ಕೂಡ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2003 ರ ವಿಶ್ವಕಪ್‌ನಲ್ಲಿ ಸಚಿನ್ 673 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಈ ಬಾರಿಯ ವಿಶ್ವಕಪ್‌ನಲ್ಲಿ 711 ರನ್ ಕಲೆಹಾಕುವ ಮೂಲಕ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ 3 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50+ ಸ್ಕೋರ್ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 2003 ರ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ 7 ಬಾರಿ 50+ ಸ್ಕೋರ್ಗಳಿಸಿದ್ದರು. ಇದೀಗ 8ನೇ ಬಾರಿ 50+ ಸ್ಕೋರ್ಗಳಿಸುವ ಮೂಲಕ ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಒಂದೇ ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಸಿಕ್ಸರ್: 28- ರೋಹಿತ್ (2023) 26 ಗೇಲ್ (2015) 24 ಶ್ರೇಯಸ್ ಅಯ್ಯರ್ (2023) 22 ಮ್ಯಾಕ್ಸ್ ವೆಲ್ (2023)
ವಿಶ್ವಕಪ್‌ನಲ್ಲಿ ಸತತ ಗೆಲುವು 25 – ಆಸ್ಟ್ರೇಲಿಯಾ (1999-2011) 11 – ಭಾರತ (2011-2015) 10 – ಭಾರತ (2023)
ಒಂದೇ ವಿಶ್ವಕಪ್‌ನಲ್ಲಿ ಅತೀ ಹೆಚ್ಚು ಗೆಲುವು 11 – ಅಸ್ಟ್ರೇಲಿಯಾ ( 2003) 11- ಆಸ್ಟ್ರೇಲಿಯಾ (2007) 10* – ಭಾರತ (2023)