WORLDCUP 2023 : ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್‌ಗೆ ಲಗ್ಗೆ ಇಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 49.4 ಓವರ್‌ಗಳಿಗೆ 212 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ಸುಲಭ ರನ್‌ಗಳ ಗುರಿ ನೀಡಿತು.
ಗುರಿಯನ್ನು ಬೆನ್ನತ್ತಿದ್ದ ಆಸ್ಟ್ರೇಲಿಯಾ 47.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿ ಗೆದ್ದಿತು.
Advertisement. Scroll to continue reading.
ದಕ್ಷಿಣ ಆಫ್ರಿಕಾ ಪರ ಏಕಾಂಗಿ ಹೋರಾಟ ನಡೆಸಿದ ಡೇವಿಡ್ ಮಿಲ್ಲರ್ 116 ಎಸೆತಗಳಲ್ಲಿ 101 ರನ್ ಗಳಿಸಿದರು.
24 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು ದ.ಆಫ್ರಿಕಾ ತಂಡ. ಕ್ವಿಂಟನ್ ಡಿ ಕಾಕ್ (3), ತೆಂಬಾ ಬವುಮಾ (0), ರಸಿ ವ್ಯಾನ್ ಡೆರ್ ಡಸೆ (6), ಏಡನ್ ಮರ್ಕರಮ್ (10) ರನ್ ಗಳಿಸಲಷ್ಟೇ ಶಕ್ತರಾದರು.
ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ (47) ರನ್ ಗಳಿಸಿದರು. ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮಿನ್ಸ್ ತಲಾ ಮೂರು ವಿಕೆಟ್‌ಗಳನ್ನು ಪಡೆದರು.
ಭಾರತ – ಆಸ್ಟ್ರೇಲಿಯಾ ಮುಖಾಮುಖಿ :
Advertisement. Scroll to continue reading.
ಆಸ್ಟ್ರೇಲಿಯ 8ನೇ ಬಾರಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ. ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ಭಾರತವನ್ನು ಎದುರಿಸಲಿದೆ. ಇದರೊಂದಿಗೆ 20 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ.
2003ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆದಿತ್ತು. ಆಗ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 125 ರನ್‌ಗಳ ಜಯ ಸಾಧಿಸಿತ್ತು.
Advertisement. Scroll to continue reading.