IND-AUS T-20: ಭಾನುವಾರ ಎರಡನೇ ಪಂದ್ಯ; ಮಳೆ ಅಡ್ಡಿ ಸಾಧ್ಯತೆ
Published
0
ಮುಂಬೈ : ವಿಶ್ವ ಕಪ್ ಫೈನಲ್ ಸೋತ ಬಳಿಕ ಭಾರತದ ಯುವ ಪಡೆ ಆಸ್ಟ್ರೇಲಿಯಾ ಜತೆಗೆ ಟಿ-20 ಸರಣಿ ಆಡುತ್ತಿದೆ. ಈಗಾಗಲೇ ಮೊದಲ ಟಿ-20 ಪಂದ್ಯದಲ್ಲಿ 200+ ರನ್‌ಗಳ ಟಾರ್ಗೆಟ್ ಬೆನ್ನಟ್ಟಿ ರೋಚಕ ಜಯ ಸಾಧಿಸಿರುವ ಭಾರತ, ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಉಭಯ ತಂಡಗಳು ದ್ವಿತೀಯ ಟಿ20ಗೆ ಸಜ್ಜಾಗುತ್ತಿದೆ. ಎರಡನೇ ಪಂದ್ಯ ನ.26ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಎರಡನೇ T20I ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ತಿರುವನಂತಪುರಂಗೆ ಬಂದಿದೆ. ಆದರೆ, ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ತಿರುವನಂತಪುರಂನಲ್ಲಿ ಜೋರಾಗಿ ಮಳೆಯಾಗುತ್ತಿದೆ. ತಿರುವನಂತಪುರಂನಲ್ಲಿ ನವೆಂಬರ್ 26 ರಂದು 25 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂನ ವಿಕೆಟ್‌ಗಳು ದೊಡ್ಡ ಸ್ಕೋರ್‌ಗಳಿಗೆ ಹೆಸರಾಗಿಲ್ಲ. ಏಕೆಂದರೆ ಇಲ್ಲಿ ನಡೆದ ನಾಲ್ಕು ಅಂತಾರಾಷ್ಟ್ರೀಯ ಟಿ20 ಕೂಡ ಕಡಿಮೆ ಸ್ಕೋರಿಂಗ್ ಪಂದ್ಯಗಳಾಗಿವೆ. ಸರಾಸರಿ ಸ್ಕೋರ್ 114 ಆಗಿದೆ. ಪಿಚ್ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ ಬೌಲರ್‌ಗಳಿಗೆ ಅನುಕೂಲಕರವಾಗಿರುತ್ತದೆ.
ಇಲ್ಲಿನ ಪಿಚ್‌ನ ತೇವಾಂಶವು ವೇಗದ ಬೌಲರ್‌ಗಳಿಗೆ ಕೂಡ ಸಹಾಯ ಮಾಡುತ್ತದೆ. ಸಾಮಾನ್ಯವಾಗಿ ಬೌಲರ್‌ಗಳಿಗೆ ಅನುಕೂಲವಾಗುವ ಈ ಪಿಚ್ನಲ್ಲಿ ಅಂಕಿಅಂಶಗಳನ್ನು ಪರಿಗಣಿಸಿದರೆ, ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವ ಸಾಧ್ಯತೆಯಿದೆ.
Advertisement. Scroll to continue reading.
ಪಂದ್ಯ ಆರಂಭ: ಸಂಜೆ 7 ಗಂಟೆ ಸ್ಥಳ: ತಿರುವನಂತಪುರಂ ನೇರಪ್ರಸಾರ: ಜೀಯೋ ಸಿನಿಮಾ, ಸ್ಪೋರ್ಟ್ಸ್ 18
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್