ಬೆಂಗಳೂರು : ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
Published
2
ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದೆ. ಕಂಬಳ ಕೆರೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ- ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.
ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು.
Advertisement. Scroll to continue reading.
ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೆÇಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇನ್ನು ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ. ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.
ಬಹುಮಾನ ವಿವರ :
ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.