ರಾಜ್ಯ

ನಾಪತ್ತೆಯಾಗಿದ್ದ ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ಮೃತದೇಹ ಪತ್ತೆ

0

ಬೆಂಗಳೂರು : ನಾಪತ್ತೆಯಾಗಿದ್ದ ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ಪತ್ತೆಯಾಗಿದೆ. 

ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತವಾಗಿ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮ ಬಳಿ ಪತ್ತೆಯಾಗಿತ್ತು.

Advertisement. Scroll to continue reading.

ಹೀಗಾಗಿ ಪೊಲೀಸರು ನಿರ್ಜನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಮಹದೇವಯ್ಯ ಅವರ ಮೃತದೇಹ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ‌ ಮನೆಗೆ ಬಂದು ತಂಗುತ್ತಿದ್ದರು. ಆದರೆ ಕಳೆದ ಡಿಸೆಂಬರ್ 2ರಂದು ಡಿಢೀರ್ ನಾಪತ್ತೆಯಾಗಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com