ಶಿರಸಿ: ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮಂಗಳೂರಿನ ರಾಮಕೃಷ್ಣ ಬಾಬುರಾವ್ (೭೧), ವಿದ್ಯಾಲಕ್ಷ್ಮೀ ರಾಮಕೃಷ್ಣ(೬೫), ಪುಷ್ಪಾ ಮೋಹನ ರಾವ್ (೬೨), ಸುಹಾಸ್ ಗಣೇಶ ರಾವ್ (೩೦), ಹಾಗೂ ಚೆನ್ನೈನ ಅರವಿಂದ(೩೦) ಎಂದು ಗುರುತಿಸಲಾಗಿದೆ. ಮೃತರು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.
ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಬಾಗ ಸಂಪೂರ್ಣ ಜಖಂಗೊAಡಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಸಂಬAಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
Advertisement. Scroll to continue reading.