ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡ ಚಿತ್ರರಂಗ, ರಾಜಕೀಯ ವಲಯ, ಅಭಿಮಾನಿಗಳು ಕಂಬಿನಿ ಮಿಡಿಯುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಹಿರಿಯ ನಟಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಲೀಲಾವತಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
Advertisement. Scroll to continue reading.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.
Advertisement. Scroll to continue reading.