ಬೆಂಗಳೂರು: ಎನ್‌ಐಎ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ದಾಳಿ ವೇಳೆ ಬೆಂಗಳೂರಿನಲ್ಲಿ ಓರ್ವ ಶಂಕಿತ ಉಗ್ರ ಸೇರಿ 13 ಮಂದಿಯನ್ನು ಬಂಧಿಸಿದೆ.
ಇಂದು ಬೆಳಿಗ್ಗೆಯಿಂದಲೇ ಎನ್ಐಎ ಕರ್ನಾಟಕದ 1 , ಪುಣೆಯ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ ಒಂಬತ್ತು ಮತ್ತು ಭಾಯಂದರ್‌ನಲ್ಲಿ ಒಂದು ಪ್ರದೇಶದ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನ ಪುಲಿಕೇಶಿನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದ ಆಲಿ ಅಬ್ಬಾಸ್ ಪೇಟಿವಾಲ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿದೆ.
Advertisement. Scroll to continue reading.
ಐಸಿಸ್‌ನೊಂದಿಗೆ ಸಂಪರ್ಕ ಹೊಂದಿರುವ ಮುಂಬೈ ಮೂಲದ ಅಲಿ ಅಬ್ಬಾಸ್ ಕಳೆದ ನಾಲ್ಕು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾನೆ. ಬೆಂಗಳೂರಿಗೆ ಬರುವ ಮೊದಲು ಪುಣೆಯಲ್ಲಿ ನೆಲೆಸಿದ್ದ. ಅನಂತರ ಪುಣೆಯಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ. ಬೆಂಗಳೂರಿನಲ್ಲಿದ್ದುಕೊಂಡು ದೇಶದ ನಾನಾ ಭಾಗಗಳಿಗೆ ಸಂಚರಿಸುತ್ತಿದ್ದ. ಅಲಿ ಅಬ್ಬಾಸ್ ಹಾಗೂ ಪತ್ನಿ ಮೂವರು ಮಕ್ಕಳು ಹೊಂದಿದ್ದಾನೆಂದು ವರದಿಗಳು ತಿಳಿಸಿವೆ.
ಈತ ಒಂದು ವರ್ಷದ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೋವಿಡ್ ಸಂದರ್ಭದಲ್ಲಿ ಕೆಲಸ ಬಿಟ್ಟಿದ್ದ. ಪತ್ನಿ ನ್ಯೂಟ್ರಿಕೇರ್ ಆಸ್ಪತ್ರೆ ನಡೆಸುತ್ತಿದ್ದಾಳೆ. ಈ ನಡುವೆ ಕೆಲಸ ಬಿಟ್ಟು ಸ್ಥಳೀಯವಾಗಿ ವಾಟ್ಸಪ್ ಗ್ರೂಪ್ ಮಾಡಿಕೊಂಡು ಇತರರನ್ನು ಆಡ್ ಮಾಡಿದ್ದಾನೆ. ಗ್ರೂಪ್‌ನಲ್ಲಿ ತನ್ನ ವಿಚಾರ ಒಪ್ಪುವ, ತನ್ನ ಪರವಾಗಿ ಮಾತನಾಡುವವರನ್ನು ಬೇರೊಂದು ಗ್ರೂಪ್‌ಗೆ ಆಡ್ ಮಾಡುತ್ತಿದ್ದ.
ಹೀಗೆ ಸ್ಥಳೀಯವಾಗಿ ವಾಟ್ಸಪ್, ಟೆಲಿಗ್ರಾಂ ಹಲವು ಗ್ರೂಪ್ ಗಳನ್ನು ಮಾಡಿದ್ದ ಈ ತನ್ನ ವಿಚಾರ ಒಪ್ಪುವವರಿಗೆಲ್ಲ ಬೇರೊಂದು ಗ್ರೂಪ್ ಮಾಡಿ ಅದರಲ್ಲಿ ಪ್ರಚೋದನೆ ನೀಡುವ ಹೇಳಿಕೆ ಕಳುಹಿಸುತ್ತಿದ್ದ ಎನ್ನಲಾಗಿದೆ.
ಸ್ಥಳೀಯವಾಗಿ ತೀರಾ ಹತ್ತಿರದವರಿಗೆ ವಾಟ್ಸಪ್ ಯೂಸ್ ಮಾಡದಂತೆ ಹೇಳುತ್ತಿದ್ದ. ವಾಟ್ಸಪ್‌ಗಿಂತ ಟೆಲಿಗ್ರಾಂ ಸುರಕ್ಷಿತ. ಅದನ್ನೇ ಬಳಸುವಂತೆ ಸೂಚನೆ ನೀಡುತ್ತಿದ್ದ. ಸದ್ಯ ಈತನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಈತನ ಬಗ್ಗೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಗಳಿವೆ.
Advertisement. Scroll to continue reading.