ನವದೆಹಲಿ : ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುತ್ತಿರುವ ಭಯೋತ್ಪಾದಕರು ಇತ್ತೀಚೆಗೆ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಕಳೆದ ಕೆಲವು ದಿನಗಳಲ್ಲಿ, ಅನೇಕ ಕುಖ್ಯಾತ ಭಯೋತ್ಪಾದಕರು ಅಪರಿಚಿತ ದಾಳಿಕೋರರಿಂದ ಕೊಲ್ಲಲ್ಪಟ್ಟಿದ್ದಾರೆ. ಈ ನಡುವೆ, ಜೈಶ್-ಎ-ಮೊಹಮ್ಮದ್ ಉಗ್ರಗಾಮಿ ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್‌ನನ್ನ ಹಫೀಜಾಬಾದ್‌ನಲ್ಲಿ ಅಪರಿಚಿತರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ..
ಹಫೀಜಾಬಾದ್‌ನಲ್ಲಿ ಈತನ ಅಪಹರಣ ನಡೆದಿದೆ.
ಈತ 2019ರಲ್ಲಿ ಪುಲ್ವಾಮಾ ದಾಳಿಯ ಸಂಚು ರೂಪಿಸಿದ್ದ ಎನ್ನಲಾಗ್ತಿದೆ.
Advertisement. Scroll to continue reading.
ಡೇರಾ ಹಾಜಿ ಗುಲಾಮ್‌ನಲ್ಲಿ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಲಂಗೀರ್ ಹೋಗುತ್ತಿದ್ದಾಗ ಅಪರಿಚಿತ ಕಾರು ಸವಾರರು ಅವನನ್ನು ಅಪಹರಿಸಿದ್ದಾರೆ ಎಂದು ಹೇಳಲಾಗಿದೆ.
ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್ 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಯೋಜನೆ ಮತ್ತು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಈ ಘಟನೆಯಲ್ಲಿ 40 ಕ್ಕೂ ಹೆಚ್ಚು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಗಳು ಹುತಾತ್ಮರಾಗಿದ್ದರು. ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಯಿತು.
ಏಪ್ರಿಲ್ 2022 ರಲ್ಲಿ, ಭಾರತವು ಮೊಹಿಯುದ್ದೀನ್ ಔರಂಗಜೇಬ್ ಅಲಂಗೀರ್‌ನನ್ನು ಭಯೋತ್ಪಾದಕ ಎಂದು ಘೋಷಿಸಿತು. ಅಲಂಗೀರ್ ಜೆಎಂನ ನಿಧಿ ಸಂಗ್ರಹ ಚಟುವಟಿಕೆಗಳನ್ನು ನೋಡಿಕೊಳ್ಳುತ್ತಾನೆ ಮತ್ತು ಈ ನಿಧಿಯನ್ನು ಕಾಶ್ಮೀರಕ್ಕೆ ಕಳುಹಿಸುತ್ತಿದ್ದ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ಸಂಘಟಿಸಲು ಮತ್ತು ಅಫ್ಘಾನಿಸ್ತಾನದ ಸೈನಿಕರ ಒಳನುಸುಳುವಿಕೆಯನ್ನು ಸುಗಮಗೊಳಿಸುವಲ್ಲಿ ಈತ ನಿರತನಾಗಿದ್ದ ಎನ್ನಲಾಗಿದೆ.
Advertisement. Scroll to continue reading.