ಕಾಪು : ಕಾರು ಡಿಕ್ಕಿ ಹೊಡೆದು ವಿದ್ಯುತ್ ಕಂಬ ತುಂಡಾಗಿರುವ ಘಟನೆ ಮಲ್ಲಾರು ಗ್ರಾಮದಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮಲ್ಲಾರು ಗ್ರಾಮದ ಕೊಪ್ಪಲಂಗಡಿ ಮಸೀದೆ ಬಳಿ ಇರುವ ವಿದ್ಯುತ್ ಕಂಬಕ್ಕೆ ಹಾಗು ಪರಿವರ್ತಿತ ಕೇಂದ್ರಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ವಿದ್ಯುತ್ ಕಂಬ ಹಾಗೂ ಪರಿವರ್ತಿತ ಕೇಂದ್ರ ತುಂಡಾಗಿದೆ. ಇದರಿಂದಾಗಿ ಮೆಸ್ಕಾಂ ಇಲಾಖೆಗೆ ಸುಮಾರು 1,50,000/- ರೂ ನಷ್ಟ ಉಂಟಾಗಿದೆ ಎನ್ನಲಾಗಿದೆ.
Advertisement. Scroll to continue reading.
ಕಾರು ಚಾಲಕನ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.