ರಾಜ್ಯ

ಭಾರತದಲ್ಲಿ ಉಗ್ರ ದಾಳಿಗೆ ಸಂಚು; ಬೆಂಗಳೂರಿನ 6 ಕಡೆ ಎನ್ಐಎ ದಾಳಿ

1

ಬೆಂಗಳೂರು : ದೇಶದಲ್ಲಿ ಭಯೋತ್ಪಾದನ ಕೃತ್ಯ ನಡೆಸಲು ಉಗ್ರರು ಸಂಚು ರೂಪಿಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದೆ. ಇಂದು ಬೆಳಗ್ಗೆ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.

ಶಂಕಿತ ಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಯಾಗಿದೆ.

ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ

Advertisement. Scroll to continue reading.

ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಹಲವು ಮಾಹಿತಿ ನೀಡಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬಂಧಿಸಿ ದಾಳಿಗಳು ನಡೆದಿವೆ. ಮುದಾಸಿರ್, ಜಾಹಿದ್, ತಬ್ರೇಜ್ ಮಹಮದ್ ಉಮರ್ ಸೇರಿ 5 ಜನರನ್ನು ಬಂಧಿಸಲಾಗಿತ್ತು.

ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ಈ ಪ್ರಕರಣ ಇತ್ತೀಚೆಗಷ್ಟೇ ಎನ್‌ಐಎಗೆ ವರ್ಗಾವಣೆ ಆಗಿತ್ತು.

ವಿಚಾರಣೆಯ ವೇಳೆ ವಿದೇಶದಿಂದ ಜುನೈದ್ ಎಂಬ ಉಗ್ರ ಆಪರೇಟ್ ಮಾಡುತ್ತಾ ಇದ್ದದ್ದು ಬೆಳಕಿಗೆ ಬಂದಿತ್ತು. ಜೊತೆಗೆ ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂಬುದು ತಿಳಿದುಬಂದಿತ್ತು.

Advertisement. Scroll to continue reading.

ಈ‌ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಇಂದು ನಡೆಸಿರುವ ದಾಳಿಯಲ್ಲಿ ಆರು ಕಡೆ ಮನೆಗಳ ಪರಿಶೀಲನೆ ಮಾಡಿದೆ. ದಾಳಿಯಲ್ಲಿ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆಗಳಿವೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com