ನವದೆಹಲಿ: ಲೋಕಸಭೆಯಲ್ಲಿ ಗದ್ದಲ ಉಂಟು ಮಾಡಿದ ಹಿನ್ನೆಲೆ 33 ಪ್ರತಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ, ಡಿಎಂಕೆ ಸಂಸದ ಟಿಆರ್ ಬಾಲು , ದಯಾ ನಿಧಿ ಮಾರನ್ ಮತ್ತು ಟಿಎಂಸಿ ಸಂಸದ ಸುಗತಾ ರಾಯ್ ಸೇರಿದಂತೆ 33 ಮಂದಿ ಅಮಾನತು ಗೊಂಡಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಸಂಸದರ ಅಮಾನತು ಪ್ರಸ್ತಾವನೆಯನ್ನು ಸದನದಲ್ಲಿ ಮಂಡಿಸಿದ್ದು, ಪ್ರಸ್ತಾವನೆಯನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
Advertisement. Scroll to continue reading.
ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಸಂಭವಿಸಿದರ ಕುರಿತು ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಂಸತ್ತಿಗೆ ಬಂದು ಮಾತನಾಡಬೇಕೆಂದು ಪ್ರತಿಪಕ್ಷಗಳು ತಮ್ಮ ಬೇಡಿಕೆಯನ್ನು ಇಂದೂ ಕೂಡ ಮುಂದುವರೆಸಿದ್ದರು.
ಇವರಲ್ಲಿ 30 ಮಂದಿಯನ್ನು ಈ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಅಮಾನತುಗೊಳಿಸಲಾಗಿದೆ. ಇನ್ನೂ ಮೂವರ ಅಮಾನತಿನ ಬಗ್ಗೆ ತೀರ್ಮಾನವಾಗಿಲ್ಲ ಎಂದು ತಿಳಿದು ಬಂದಿದೆ.
Advertisement. Scroll to continue reading.