ಹೊಸದಿಲ್ಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯ ಸಂಸತ್ ಭವನದಲ್ಲಿರುವ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ಜೆಡಿಎಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿದ್ದಾರೆ. ಇವರೊಂದಿಗೆ ಪ್ರಜ್ವಲ್ ರೇವಣ್ಣ ಕೂಡ ಇದ್ದರು.
Advertisement. Scroll to continue reading.
ಇನ್ನು ಈ ಭೇಟಿಯ ಕುರಿತು ಎಕ್ಸ್ ನಲ್ಲಿ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ. ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ.
ಮಾಜಿಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ನವದೆಹಲಿಯ ಸಂಸತ್ ಭವನದ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಸಕ್ತ ರಾಜಕೀಯ ಪರಿಸ್ಥಿತಿಗಳ ಜತೆಗೆ, ಕರ್ನಾಟಕದ ರೈತಾಪಿ ಜನರ ಸಮಸ್ಯೆಗಳನ್ನು ಮಾನ್ಯ ಪ್ರಧಾನಿಗಳ ಗಮನಕ್ಕೆ ತರಲಾಯಿತು. ಅಲ್ಲದೆ, ಕೊಬರಿ ಖರೀದಿಯ ಬಗ್ಗೆ ಅವರಿಗೆ ಅಹವಾಲು ಸಲ್ಲಿಸಲಾಯಿತು. ನಮ್ಮ ಮನವಿಗೆ ಮಾನ್ಯ ಪ್ರಧಾನಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದಿದ್ದಾರೆ.
Advertisement. Scroll to continue reading.