ರಾಜ್ಯ

ರಾಜ್ಯದಲ್ಲಿ ಇಂದು 103 ಮಂದಿಗೆ ಕೊರೋನಾ ಸೋಂಕು ದೃಢ, ಒಂದು ಸಾವು

1

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಮೈಸೂರಿನಲ್ಲಿ ಒಂದು ಸಾವು ಸಂಭವಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. 1.41 ರಷ್ಟು ಇದೆ. ಬೆಂಗಳೂರಿನಲ್ಲಿ 2,321 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ 80 ಮಂದಿಗೆ ಸೋಂಕು ದೃಢಪಟ್ಟಿದೆ. 

ಶಿವಮೊಗ್ಗ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಪ್ರಕರಣ, ವಿಜಯಪುರದಲ್ಲಿ 1, ತುಮಕೂರಿನಲ್ಲಿ 1, ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

Advertisement. Scroll to continue reading.

ಸೋಂಕಿತರಲ್ಲಿ 422 ಮಂದಿ ಮನೆ ಆರೈಕೆಗೆ ಒಳಗಾದರೆ, 57 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 19 ಮಂದಿ ತೀವ್ರ ನಿಗಾ ಘಟಕದಲ್ಲಿ ಹಾಗೂ 38 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಇದ್ದಾರೆ. ಸೋಂಕಿತರಲ್ಲಿ 87 ಮಂದಿ ಇಂದು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com